ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ಜಿಲ್ಲಾ ಪಂಚಾಯಿತಿಯಲ್ಲಿ 14 ರೇಷ್ಮೆ ತಾಂತ್ರಿಕ ಸಹಾಯಕರು, ತೋಟಗಾರಿಕೆ ತಾಂತ್ರಿಕ ಸಹಾಯಕರು, ಅರಣ್ಯ ತಾಂತ್ರಿಕ ಸಹಾಯಕರು, ತಾಂತ್ರಿಕ ಸಹಾಯಕ ಮತ್ತು ತಾಲೂಕು ಎಮ್.ಐ.ಎಸ್ ಸಂಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳಿಗನುಸಾರ ಬಿ.ಎಸ್ಸಿ, ಬಿಸಿಎ, ಬಿಇ ವಿದ್ಯಾರ್ಹತೆ ಜೊತೆಗೆ ಅಕ್ಟೋಬರ್ 19,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಕ್ಟೋಬರ್ 19,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.