ಬಾಗಲಕೋಟೆ ಅಪಘಾತ: ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಗಲಕೋಟೆಯ ಜಮಖಂಡಿ ತಾಲೂಕಿನ ಆಲಗೂರು ಸಮೀಪದಲ್ಲಿ ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಮೃತರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಬಾಳಿ ಬದುಕಬೇಕಿದ್ದ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದ್ದು ಘೋರ ಅನ್ಯಾಯ, ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಹೇಳಿದ್ದಾರೆ.

ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಮೃಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ಮಧ್ಯರಾತ್ರಿ 12 ಗಂಟೆಗೆ ಸಂಭವಿಸಿತ್ತು. ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ (13), ಬಸವರಾಜ (17) ಮೃತರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!