ಹೊಸದಿಗಂತ ವರದಿ ಬಾಗಲಕೋಟೆ :
ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ಅತ್ತ್ಯುತ್ತಮ ಕಾರ್ಯ ನಿರ್ವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಉಪವಿಭಾಗಾಧಿಕಾರಿ ಬಾಗಲಕೋಟೆ ಶ್ವೇತಾ ಬೀಡಿಕರ ಅವರಿಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಶಸ್ತಿ ನೀಡಿ ಗೌರವಿಸಿದರು.