ಶಿವಮೊಗ್ಗದಲ್ಲಿ ಬಗನಕಟ್ಟೆ ಪಿಡಿಓ ಮಂಜುನಾಥ ಲೋಕಾಯುಕ್ತ ಬಲೆಗೆ

ಹೊಸದಿಗಂತ ವರದಿ, ಶಿವಮೊಗ್ಗ:

ಮಳೆಯಿಂದ ಬಿದ್ದು ಹೋಗಿದ್ದ ಮನೆಗೆ ಸಹಾಯಧನ ಬಿಡುಗಡೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ಶಿಕಾರಿಪುರ ತಾಲೂಕು ಬಗನಕಟ್ಟೆ ಗ್ರಾಪಂ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ ಎಂಬುವವರ ಮನೆ 2021ರ ಮಳೆಯಿಂದ ಕುಸಿದಿತ್ತು.  ಮನೆ ಪುನರ್ ನಿರ್ಮಾಣಕ್ಕಾಗಿ ಪರಿಹಾರ ‘ನಕ್ಕೆ ಅರ್ಜಿ ಸಲ್ಲಿಸಿದ್ದರು. ಜಿಪಿಎಸ್‌ನಲ್ಲಿ ಮಾಹಿತಿ ಸಂಗ್ರಹಿಸಿ ವರದಿ ಮಾಡಲು  ಬಗನಕಟ್ಟೆ ಗ್ರಾಪಂ ಪಿಡಿಓ ಮಂಜುನಾಥ ಸಾಕಮ್ಮ ಬಳಿ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಲ್ಲಿ 13,000 ರೂ. ನೀಡಲಾಗಿತ್ತು.
ಸಾಕಮ್ಮ ಅವರಿಗೆ ಮನೆ ಪುನರ್ ನಿರ್ಮಾಣಕ್ಕೆ ರಾಜೀವ್‌ಗಾಂ ವಸತಿ ಯೋಜನೆಯಡಿ 5.00ಲಕ್ಷ ಪರಿಹಾರ ‘ನ ಮಂಜೂರಾಗಿತ್ತು. ಮನೆಯ ಪುನರ್ ನಿರ್ಮಾಣ ಮುಕ್ತಾಯಗೊಂಡಿದೆ.

ನೆರೆ ಸಂತ್ರಸ್ಥರ ಪುನರ್ ವಸತಿ ಯೋಜನೆಯಂತೆ ಕಂತಿನ ಹಣ ರೂ. 1 ಲಕ್ಷ ರೂ. ಬಿಡುಗಡೆ ಮಾಡಲು ಪಿ.ಡಿ.ಓ ಮಂಜುನಾಥ ಮತ್ತೊಮ್ಮೆ 6000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸಾಕಮ್ಮ ಶಿವಮೊಗ್ಗ ಲೋಕಾಯುಕ್ತ ಕಚೇರಿಗೆ ಮಾಹಿತಿ ನೀಡಿದ್ದರು.

ಪಿಡಿಓ ಮಂಜುನಾಥ ಸಾಕಮ್ಮ ಅವರಿಂದ 6 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಸಿದ್ದಾರೆ.
ಶಿವಮೊಗ್ಗ ಲೋಕಾಯುಕ್ತ ಕಛೇರಿಯ ಪೊಲೀಸ್ ನಿರೀಕ್ಷಕ ಎನ್. ವಾಸುದೇವರಾಮ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ, ಪೊಲೀಸ್ ನಿರೀಕ್ಷಕ ಹೆಸ್.ಎಸ್. ಸುರೇಶ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಎಸ್.ಕೆ. ಪ್ರಸನ್ನ,  ಮಹಂತೇಶ, ಬಿ.ಟಿ ಚನ್ನೇಶ, ಪ್ರಶಾಂತ್ ಕುಮಾರ್, ರಘುನಾಯ್ಕ, ಸುರೇಂದ್ರ, ಅರುಣ್ ಕುಮಾರ್, ದೇವರಾಜ, ಪುಟ್ಟಮ್ಮ,  ಪ್ರದೀಪ್‌ಕುಮಾರ್, ತರುಣ್ ಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!