ಬಾಹುಬಲಿಯ ಕಟ್ಟಪ್ಪನಿಗೆ ಮಾತೃ ವಿಯೋಗ, ಸತ್ಯರಾಜ್ ಮನೆಯಲ್ಲಿ ಸೂತಕದ ಛಾಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಮಿಳು ನಟ ಸತ್ಯರಾಜ್ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಸತ್ಯರಾಜ್ ಅವರ ತಾಯಿ ನಾತಾಂಬಳ್ ಕಾಳಿಂಗರಾಯರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ.

ಸತ್ಯರಾಜ್ ಜೊತೆಗೆ ಇವರಿಗೆ ಇನ್ನಿಬ್ಬರು ಹೆಣ್ಣು ಮಕ್ಕಳಿದ್ದಾರೆ. ಸತ್ಯರಾಜ್ ಅವರ ತಾಯಿ ನಿಧನಕ್ಕೆ ಚಿತ್ರರಂಗ ಮತ್ತು ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಹಲವು ತೆಲುಗು ಸಿನಿಮಾಗಳಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ನಟಿಸಿದ್ದ ಸತ್ಯರಾಜ್‌, ಬಾಹುಬಲಿ ಚಿತ್ರದಲ್ಲಿ ಕಟ್ಟಪ್ಪ ಪಾತ್ರದ ಮೂಲಕ ಎಲ್ಲರನ್ನೂ ರಂಜಿಸಿದರು. ಆ ಪಾತ್ರವನ್ನು ಸತ್ಯರಾಜ್ ಅವರು ಎಂದೆಂದಿಗೂ ನೆನಪಿನಲ್ಲಿ ಉಳಿಯುವಂತೆ ಮಾಡಿದ್ದಾರೆ. ಸದ್ಯ ಸತ್ಯರಾಜ್ ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here