ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮತ್ತು ಪತ್ರಕರ್ತ ಮೊಹಮ್ಮದ್ ಜುಬೈರ್ ಜಾಮೀನು ಅರ್ಜಿಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (CMM) ಶನಿವಾರ ತಿರಸ್ಕರಿಸಿದ್ದಾರೆ.
ಈತನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಝುಬೈರ್ ಸಹ-ಸಂಸ್ಥಾಪಕರಾಗಿರುವ ಆಲ್ಟ್ ನ್ಯೂಸ್‌ ಮಾತೃಸಂಸ್ಥೆ ಪ್ರವ್ಡಾ ಮೀಡಿಯಾ ವಿದೇಶಗಳಿಂದ 2,31,933 ಮೊತ್ತದ ಹಣವನ್ನು ಸ್ವೀಕರಿಸಿದೆ ಎಂದು ದೆಹಲಿ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಜುಬೈರ್ 4 ದಿನಗಳ ಪೊಲೀಸ್ ಕಸ್ಟಡಿ ಇಂದು ಕೊನೆಗೊಂಡಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಇನ್ನು ನ್ಯಾಯಾಲಯದ ಮುಂದೆ ದೆಹಲಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಕೋರಿದ್ದರು. ಪೊಲೀಸರ ಮನವಿಯನ್ನ ಪುರಸ್ಕರಿಸಿದ ನ್ಯಾಯಾಲಯ, ಮೊಹಮ್ಮದ್ ಜುಬೈರ್ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!