Saturday, October 1, 2022

Latest Posts

ಮುರುಘಾ ಶ್ರೀಗಳ ಜಾಮೀನು ಅರ್ಜಿ ವಜಾ: ಮತ್ತೆ ಜೈಲೇ ಗತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಇದೀಗ ಮುರಾಘ ಶ್ರೀಗಳಳಿಗೆ ಜೈಲೇ ಗತಿಯಾಗಿದೆ.
ಚಿತ್ರದುರ್ಗ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಇಂದು ತೀರ್ಪು ಪ್ರಕಟಿಸಿದ ಕೋರ್ಟ್, ಜಾಮೀನು ನೀಡಲು ನಿರಾಕರಿಸಿದೆ. ಮುರುಘಾ ಶ್ರೀಗಳ ನ್ಯಾಯಾಗಂಬ ಬಂಧನ ಅವಧಿ ಸೆಪ್ಟೆಂಬರ್ 27ಕ್ಕೆ ಅಂತ್ಯವಾಗಲಿದೆ.
ಜೈಲಿನಲ್ಲಿದ್ದ ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಕೋರ್ಟ್ ಸೂಚನೆ ನೀಡಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಘಾ ಶ್ರೀಗಳ ಆರೋಗ್ಯ ಚೇತರಿಕೆ ಕಂಡಿದೆ. ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ದಾಖಲಾದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಸ್ವಾಮೀಜಿ ಅವರಿಗೆ ಯಶಸ್ವಿಯಾಗಿ ಆ್ಯಂಜಿಯೋಗ್ರಾಂ ಮಾಡಲಾಗಿದ್ದು, ಶ್ರೀಗಳ ಆರೋಗ್ಯ ಸ್ಥಿರವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!