ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬ್ಧ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಜಾಮೀನು ಪುರಸ್ಕರಿಸಿದೆ

ಆರೋಪಿಗಳಾದ ಹುಕ್ಕೇರಿಯ ಭರತ್​ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಶ್ರೀಕಾಂತ್ ಪಂಗರ್ಕರ್ (48), ಶಿಕಾರಿಪುರದ ಸುಜಿತ್ ಕುಮಾರ್ (42), ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಲೇಕರ್ (43) ಜಾಮೀನು ಪಡೆದರು.

ಈ ಎಲ್ಲ ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್​, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು. ಆರೋಪಿಗಳು ಪ್ರಸಿಕ್ಯೂಷನ್​ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂಥದ್ದೇ ಆರೋಪದಲ್ಲಿ ಭಾಗಿಯಾಗಬಾರದು ಎಂದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!