ಜುಬೈರ್‌ಗೆ ಜಾಮೀನು: ಇಂದು ಸಂಜೆ 6 ಗಂಟೆಯೊಳಗೆ ಬಿಡುಗಡೆಗೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶ ಪೊಲೀಸರು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ದಾಖಲಿಸಿದ್ದ ಎಲ್ಲಾ ಆರೂ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ೬ ಗಂಟೆಯೊಳಗೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಆದೇಶಿಸಿದೆ.
ಸಲ್ಲಿಸಲಾಗಿರುವ ಎಲ್ಲಾ ಎಫ್‌ಐಆರ್‌ಗಳಲ್ಲಿ ಜುಬೈರ್‌ನನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು. ಅವರನ್ನು ನಿರಂತರ ಕಸ್ಟಡಿಯಲ್ಲಿ ಇರಿಸಿಕೊಳ್ಳುವುದನ್ನು ಸಮರ್ಥಿಸಿಕೊಳ್ಳಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಜೊತೆಗೆ ಜುಬೈರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಒಟ್ಟುಗೂಡಿಸಿ, ದೆಹಲಿಗೆ ವರ್ಗಾಯಿಸಬೇಕು, ಈ ಕುರಿತಂತೆ ಏಕೀಕೃತ ತನಿಖೆ ನಡೆಯಬೇಕೆಂದು ನಾಗಯಾಲಯ ಅಭಿಪ್ರಾಯಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!