ಬಜಪೆ: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರಿನ ಹೊರವಲಯ ಬಜಪೆ ಕಿನ್ನಿಪದವು ಎಂಬಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಮಾರಣಾಂತಿಕ ದಾಳಿಯಲ್ಲಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಸುಹಾಸ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಗುರುವಾರ ರಾತ್ರಿ 8.45 ರ ಸುಮಾರಿಗೆ ಬಜಪೆ ಕಿನ್ನಿಪದವು ಪೆಟ್ರೋಲ್ ಪಂಪ್ ಬಳಿ ಈ ದಾಳಿ ನಡೆದಿದ್ದು, ಕಾರಿನಲ್ಲಿ ಸಾಗುತ್ತಿದ್ದ ಸುಹಾಸ್ ಮತ್ತು ಸ್ನೇಹಿತರನ್ನು ವಾಹನದಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಅಡ್ಡ ಹಾಕಿ ಹಲ್ಲೆ ನಡೆಸಿ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಆಸ್ಪತ್ರೆಗೆ ಭೇಟಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆ ಮತ್ತು ಬಜಪೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!