ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹತ್ಯೆ ಪ್ರಕರಣ: ಮೂವರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್

ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಈ ಹತ್ಯೆ ಪ್ರಕರಣದ ಹಿಂದೆ ಐವರುಇದ್ದಾರೆ ಎನ್ನುವ ಮಾಹಿತಿ ಇದ್ದು, ಪ್ರಕರಣ ವಿಚಾರಣೆ ಹಂತದಲ್ಲಿ ಇರೋ ಕಾರಣ ಯಾವುದೇ ಮಾಹಿತಿ ನೀಡೋದಕ್ಕೆ ಆಗೋದಿಲ್ಲ ಎಂದರು.
ಎಡಿಜಿಪಿ ಎಸ್.ಮುರುಗನ್ ಘಟನಾ ಸ್ಥಳಕ್ಕೆ ಕಳುಹಿಸಿ ಕೊಡಲಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರೋದಕ್ಕಾಗಿಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ 200 ಪೊಲೀಸರನ್ನು ಬೆಂಗಳೂರಿನಿಂದ ನಿಯೋಜಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!