ಬಂಟ್ವಾಳದ ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ.
ಮಾಣಿಯಲ್ಲಿ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.

ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಇದು ಪ್ರತೀಕಾರ ಎನ್ನುವ ಶಂಕೆಯೂ ವ್ಯಕ್ತವಾಗಿದೆ.
ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಎನ್ನುವವರು ತಲ್ವಾರ್ ದಾಳಿಗೆ ಒಳಗಾದವರಾಗಿದ್ದಾರೆ.

ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ದೆ. ಮಾಣಿ ಜಂಕ್ಷನ್‌ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರ ತಂಡ ತನಿಖೆ ಮುಂದುವರೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!