Saturday, August 13, 2022

Latest Posts

ಉದಯಪುರದಲ್ಲಿ ಹಿಂದೂ ಹತ್ಯೆ ಖಂಡಿಸಿ ಬಜರಂಗದಳ ಪ್ರತಿಭಟನೆ; ಆರೋಪಿಗಳ ಪ್ರತಿಕೃತಿ ದಹಿಸಿ ಆಕ್ರೋಶ

ಹೊಸದಿಗಂತ ವರದಿ ವಿಜಯಪುರ:
ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ನಗರದ ಸಿದ್ಧೇಶ್ವರ ದೇವಸ್ಥಾನದ ಎದುರು ವಿಶ್ವ ಹಿಂದು ಪರಿಷತ್, ಭಜರಂಗದಳ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಗಾಂಧಿಚೌಕ್ ನಲ್ಲಿ ಸೇರಿದ ಪ್ರತಿಭಟನಾಕಾರರು, ದರ್ಜಿ ಕನ್ಹಯ್ಯರನ್ನು ಹತ್ಯೆಗೈದಿರುವ ಆರೋಪಿಗಳ ಪ್ರತಿಕೃತಿ ದ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜಸ್ಥಾನದಲ್ಲಿ ಹಿಂದೂ ವ್ಯಕ್ತಿಯ ಬರ್ಬರ ಹತ್ಯೆಯಾಗಿದೆ. ಇಂತಹ ಪ್ರಕರಣದಲ್ಲಿ ಭಾಗಿಯಾದ ಆರೋಪಗಳಿಗೆ ಕಠಿಣ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರು ಜೈ ಶ್ರೀರಾಮ, ಜೈ ಭಜರಂಗಿ ಎಂದು ಘೋಷಣೆ ಕೂಗಿದರು. ಅಲ್ಲದೇ, ದೇಶದ್ರೋಹಿ ಭಯೋತ್ಪಾದಕರಿಗೆ ದಿಕ್ಕಾರ ಕೂಗಿ, ಹತ್ಯೆಗೈದಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss