ಹೊಸದಿಗಂತ ಡಿಜಿಟಲ್ ಡೆಸ್ಕ್
ಪ್ರವಾದಿ ಕುರಿತಾಗಿ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಯನ್ನು ಮುಂದಿಟ್ಟುಕೊಂಡು ಮುಸ್ಲಿಂ ಸಮುದಾಯ ನಡೆಸಿದ ಗಲಭೆ, ಹಿಂಚಾಚಾರಗಳನ್ನು ಖಂಡಿಸಿ ಬಜರಂಗದಳ ಕಾರ್ಯಕರ್ತರು ನಾಳೆ(ಜೂನ್.16) ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ.
ಪ್ರವಾದಿ ಮೊಹಮ್ಮದ್ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದಂತೆ ದೇಶದ ಕೆಲವು ಭಾಗಗಳಲ್ಲಿ ಇತ್ತೀಚಿನ ಹಿಂಸಾಚಾರದ ಘಟನೆಗಳ ವಿರುದ್ಧ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇಸ್ಲಾಮಿಕ್ ಜಿಹಾದಿ ಮೂಲಭೂತವಾದಿಗಳಿಂದ ಹೆಚ್ಚುತ್ತಿರುವ ಉಗ್ರಗಾಮಿ ಚಟುವಟಿಕೆಗಳ ವಿರುದ್ಧ ತನ್ನ ಯುವ ಘಟಕದ ಕಾರ್ಯಕರ್ತರು ಗುರುವಾರ ದೇಶಾದ್ಯಂತ ಜಿಲ್ಲಾಡಳಿತ ಕೇಂದ್ರ ಕಚೇರಿಯಲ್ಲಿ ಧರಣಿ ನಡೆಸಲಿದ್ದಾರೆ ಎಂದು ವಿಹೆಚ್‌ಪಿ ತಿಳಿಸಿದೆ.
ʼʼಜಿಹಾದಿ ಮೂಲಭೂತವಾದಿಗಳು ಹಿಂದೂಗಳ ಮೇಲೆ ನಡೆಸುತ್ತಿರುವ ನಿರಂತರ ದಾಳಿಯ ವಿರುದ್ಧ ಬಜರಂಗದಳದ ಕಾರ್ಯಕರ್ತರು ಸಿಡಿದೇಳಲಿದ್ದಾರೆ. ಗುರುವಾರ ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದ್ದಾರೆ,” ಎಂದು ಅವರು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದ್ದಾರೆ.
ಜೂನ್ 10 ರಂದು ಶುಕ್ರವಾರದ ಪ್ರಾರ್ಥನೆಯ ನಂತರ ಹಲವು ಮತಾಂಧ ಗುಂಪುಗಳು ದೇಶದ ಕೆಲವು ಭಾಗಗಳಲ್ಲಿ ಹಿಂಸಾಚಾರವನ್ನು ನಡೆಸಿವೆ. ʼಜನಸಮೂಹವನ್ನು ಪ್ರಚೋದಿಸಿದವರನ್ನು ತಕ್ಷಣವೇ ಬಂಧಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕುʼ ಎಂದು ಪರಾಂಡೆ ಆಗ್ರಹಿಸಿದ್ದಾರೆ. ನೂಪುರ್ ಗೆ ಜೀವಬೆದರಿಕೆ ಒಡ್ಡುತ್ತಿರುವ ಇಸ್ಲಾಮಿಕ್ ಮೂಲಭೂತವಾಧಿಗಳನ್ನು ಬಂಧಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ