ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶ ವಿಧಾನಸಭೆ ಚುನಾವಣಾ ತಯಾರಿಯಲ್ಲಿ ರಾಜಕೀಯ ಪಕ್ಷಗಳು ಬ್ಯುಸಿ ಆಗಿದ್ದು, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೇರಲು ಶ್ರಮಿಸುತ್ತಿದೆ.
ಇದರ ಭಾಗವಾಗಿ ರಾಜ್ಯದಲ್ಲಿ ಬಜರಂಗ ದಳವನ್ನು ನಿಷೇಧ ಮಾಡುವ ಯಾವುದೇ ಗುರಿ ನಮ್ಮ ಎದುರು ಇಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ರಾಜ್ಯಸಭಾ ಸಂಸದ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಬಜರಂಗದಳದಲ್ಲೂ ಬಹಳಷ್ಟು ಜನ ಒಳ್ಳೆಯವರಿದ್ದಾರೆ. ಆದರೆ, ಹಿಂಸಾಚಾರ ಹಾಗೂ ಗಲಭೆಯಲ್ಲಿ ಭಾಗಿಯಾಗವ ಯಾರನ್ನೂ ನಾವು ಬಿಡೋದಿಲ್ಲ ಎಂದು ಹೇಳಿದ್ದಾರೆ.
ಇನ್ನು ಮಧ್ಯಪ್ರದೇಶ ಚುನಾವಣೆ ಗೆಲ್ಲಲು ಹಿಂದುತ್ವ ಅಗತ್ಯ ಎಂದು ಅರಿತಿರುವ ಕಾಂಗ್ರೆಸ್, ಅದಕ್ಕಾಗಿ ಹಿಂದುತ್ವದ ವಿರುದ್ಧವಾಗಿರುವ ಯಾವ ವಿಚಾರಗಳನ್ನೂ ಮಾತನಾಡುತ್ತಿಲ್ಲ. ಕರ್ನಾಟಕ ವಿಧಾನಸಭೆ ಚುನಾವಣೆಯ ವೇಳೆ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ಬ್ಯಾನ್ ಮಾಡುವುದಾಗಿ ಕಾಂಗ್ರೆಸ್ ಪ್ರಕಟ ಮಾಡಿತ್ತು. ಇದು ಚುನಾವಣೆ ವೇಳೆ ಕಾಂಗ್ರೆಸ್ ಗೆ ಹಿನ್ನಡೆ ಕಾಣುವ ಅಪಾಯ ತಂದಿಟ್ಟಿತ್ತು. ಆದ್ರೆ ಗ್ಯಾರಂಟಿ ಮೂಲಕ ಅಧಿಕಾರ ಹಿಡಿದಿತ್ತು.