ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಮುಸ್ಲಿಂ ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ.
ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶದ ಸಂಭಾಲ್, ಪಾಟ್ನಾದ ಗಾಂಧಿ ಮೈದಾನ, ನವದೆಹಲಿ, ಬೆಂಗಳೂರು ಸೇರಿದಂತೆ ವಿವಿಧೆಡೆ ಶಾಂತಿಯುವಾಗಿ ನಮಾಜ್ ಮಾಡುವ ಮೂಲಕ ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ.
ವಿಶೇಷವೆಂದರೆ ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸಂಘರ್ಷಪೀಡಿತವಾಗಿದ್ದ ಜಮ್ಮು-ಕಾಶ್ಮೀರದ ಪಾಲ್ಪೋರಾ ಸೋನ್ವಾರ್‌ನ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಂತಿಯುತವಾಗಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದಾರೆ.