ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು| ಕೋವಿಡ್ 19 ನಿಯಮ ಪಾಲಿಸಿ ಬಕ್ರೀದ್ ಆಚರಿಸಿ: ಜಿಲ್ಲಾಧಿಕಾರಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕೋವಿಡ್ 19 ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಿ, ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಾಲ್ ಅವರು ಮನವಿ ಮಾಡಿದ್ದಾರೆ.
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡರ ಜೊತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ 19 ಮಾರ್ಗಸೂಚಿ ಅನುಸರಿಸಿ ಪ್ರಾರ್ಥನೆ ಸಲ್ಲಿಸಬೇಕು. ಒಂದು ವೇಳೆ ಅಧಿಕ ಜನಸಂಖ್ಯೆ ಆಗಮಿಸಿದ್ದಲ್ಲಿ ಬ್ಯಾಚ್ ಮಾದರಿಯಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಮಾತನಾಡಿ, ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು, 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಬೇಕು.ಪ್ರಾರ್ಥನೆ ಸಂದರ್ಭದಲ್ಲಿ ಕನಿಷ್ಟ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಮಸೀದಿಗಳಿಗೆ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡಬೇಕು. ಕೈಗಳನ್ನು ಸೋಪು ಅಥವಾ ಸ್ಯಾನಿಟೈಜರ್ ನಿಂದ ಶುಚಿಗೊಳಿಸಬೇಕು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನ ಮಾಡಬಾರದು ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿವಧೆ ಮತ್ತು ಬಲಿದಾನ ಮಾಡಬಾರದು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ಅಧಿನಿಯಮ 2020 ಜಾರಿಯಲ್ಲಿದ್ದು, ಕಾಯ್ದೆಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ಆಟದ ಮೈದಾನ, ಉದ್ಯಾನವನ, ಮಸೀದಿ ಹಾಗೂ ಇತರೇ ಧಾರ್ಮಿಕ ಸ್ಥಳ ಮತ್ತು ಆವರಣದಲ್ಲಿ ಪ್ರಾಣಿ ವಧೆ ಮಾಡಬಾರದು ಎಂದು ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ವಕ್ಫ್ ಮಂಡಳಿ ಸಲಹಾ ಸಮಿತಿ ಅಧ್ಯಕ್ಷ ಕೆ.ಎ.ಯಾಕುಬ್ ಅವರು, ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು, ಜಿಲ್ಲಾಡಳಿತ ಕಾಲಕಾಲಕ್ಕೆ ಹೊರಡಿಸಿರುವ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದರು.
ಒಂದೇ ಬಾರಿ ಹೆಚ್ಚು ಸಂಖೆಯಲ್ಲಿ ಪ್ರಾರ್ಥಿಸಲು ಆಗಮಿಸಿದ್ದಲ್ಲಿ 2 ಬ್ಯಾಚ್‍ಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು. ಜುಲೈ 21 ರಂದು ಬೆಳಗ್ಗೆ 10 ಗಂಟೆಯೊಳಗೆ ಬಕ್ರೀದ್ ಪ್ರಾರ್ಥನೆ ಮುಗಿಯಲಿದೆ ಎಂದು ಹೇಳಿದರು.
ಪ್ರಮುಖರಾದ ಉಸ್ಮಾನ್ ಅವರು ಮಾತನಾಡಿ ಕಳೆದ ವರ್ಷದಂತೆ ಈ ಬಾರಿಯೂ ಜಿಲ್ಲಾಡಳಿತ ಹಾಗೂ ಸರ್ಕಾರದ ನಿಯಮಗಳನ್ನು ಪಾಲಿಸಲಾಗುವುದು ಎಂದು ತಿಳಿಸಿದರು.
ಸೈಯದ್ ಅವರು ಮಾತನಾಡಿ ಸರ್ಕಾರದ ನಿಯಮವನ್ನು ಪಾಲಿಸಿ‌ ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಜಿ.ಪಂ ಯೋಜನಾ ನಿರ್ದೇಶಕ ಶ್ರಿಕಂಠಮೂರ್ತಿ, ಪೌರಾಯುಕ್ತ ಎಸ್.ವಿ.ರಾಮದಾಸ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಸುರೇಶ್ ಭಟ್, ಮುಸ್ಲಿಂ ಧಾರ್ಮಿಕ ಮುಖಂಡರು, ಪೊಲೀಸ್ ಇಲಾಖೆ ಅಧಿಕಾರಿಗಳು, ಪಶುಪಾಲನಾ ಇಲಾಖಾ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss