ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್‌ಗೆ ಬೇಲ್ ಸಿಕ್ಕ ಬೆನ್ನಲ್ಲೇ ಡಿಂಪಲ್ ಕ್ವೀನ್ ರಚಿತಾ ರಾಮ್ ಖುಷಿ ಹಂಚಿಕೊಂಡಿದ್ದಾರೆ. ಕಾಲಾಯ ತಸ್ಮೈ ನಮಃ ಎಂದು ವಿಡಿಯೋ ಹಂಚಿಕೊಂಡಿದ್ದಾರೆ.
ದರ್ಶನ್ ಬೇಲ್ ಸಿಕ್ಕಿರುವ ಖುಷಿಯನ್ನು ನಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಕಾಲವೇ ಎಲ್ಲದ್ದಕ್ಕೂ ಉತ್ತರ ಕೊಡಲಿದೆ ಎಂಬರ್ಥದಲ್ಲಿ ಕಾಲಾಯ ತಸ್ಮೈ ನಮಃ ಎಂದು ಅವರು ಹೇಳಿರುವ ತುಣುಕನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ನವಗ್ರಹ ಸಿನಿಮಾದ ಟ್ಯೂನ್ ಕೇಳಿ ಬರುತ್ತಿದೆ. ನಟಿಯ ವಿಡಿಯೋ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.