ಹೊಸದಿಗಂತ ವರದಿ ಬಳ್ಳಾರಿ:
ಕಳೆದ ಜ.1 ರಂದು ನಗರದಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣದಲ್ಲಿ ಗುಂಡಿನ ದಾಳಿಗೆ ಹತ್ಯೆಯಾಗಿದ್ದ ಕೈ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಅವರ ಬಳ್ಳಾರಿಯ ನಿವಾಸಕ್ಕೆ ಬಿಜೆಪಿಯ ನಾಯಕರು ಶನಿವಾರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ವೇಳೆ ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ.ಶ್ರೀರಾಮುಲು ಅವರು ಕುಟುಂಬಕ್ಕೆ 10 ಲಕ್ಷ ರೂ.ಗಳ ಚೆಕ್ ನ್ನು ನೀಡಿ, ನಾವೆಲ್ಲರೂ ನಿಮ್ಮೊಂದಿಗೆ, ನಿಮ್ಮ ಕಷ್ಟದಲ್ಲಿ ಇದ್ದೇವೆ ಎಂದು ಧೈರ್ಯ ತುಂಬುವ ಕೆಲಸ ಮಾಡಿದರು. ಘಟನೆ ಕುರಿತು ತನಿಖೆ ನಡೆಸುತ್ತೇವೆ, ಹತ್ಯೆಗೆ ಕಾರಣರಾದವರಿಗೆ ಶಿಕ್ಷೆ ಕೊಡಿಸುವವರೆಗೆ ಬಿಡೋಲ್ಲ, ನಾವೆಲ್ಲರೂ ನಮ್ಮ ಜೊತೆಗಿದ್ದೇವೆ ಎಂದು ಮಾಜಿ ಸಚಿವ ಶ್ರೀರಾಮುಲು ಅವರು ಕುಟುಂಬಸ್ಥರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಗುಂಡಿನ ದಾಳಿಗೆ ಅಮಾಯಕ ಕೈ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಎನ್ನುವವರು ಮೃತಪಟ್ಟಿದ್ದು, ಅವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಲಾಗಿದೆ. ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ ಮ್ಯಾನ್ ಗನ್ ನಿಂದಾ ಗುಂಡು ಹಾರಿದೆ, ಎಂದು ವರದಿಯಲ್ಲಿ ಉಲ್ಲೇಖವಾದರು, ಇಲ್ಲಿವರೆಗೆ ಪೊಲೀಸರು ಅವರನ್ನು ಬಂಧಿಸಿಲ್ಲ, ಇದು ನಾಚಿಕೆ ಗೇಡಿನ ವಿಚಾರ, ಕೂಡಲೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುವೆ ಎಂದರು.
ಮೃತಪಟ್ಟ ರಾಜಶೇಖರ ಅವರ ತಾಯಿಯನ್ನು ಸದಸ್ಯರನ್ನು, ನಾನು, ಜನಾರ್ಧನ್ ರೆಡ್ಡಿ, ಶ್ರೀರಾಮುಲು, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣ ಸ್ವಾಮಿ ಸೇರಿದಂತೆ ಅನೇಕ ನಾಯಕರು ಸೇರಿ ಭೇಟಿ ಮಾಡಿ, 10 ಲಕ್ಷ ರೂ.ಪರಿಹಾರ ಕೊಡುವ ಕೆಲಸ ಮಾಡಿದ್ದೇವೆ. ಪರಿಹಾರವೇ ಶಾಶ್ವತವಲ್ಲ, ಮೃತನ ಕುಟುಂಬಕ್ಕೆ ನ್ಯಾಯ ಸಿಗಬೇಕು, ಈ ಹಿನ್ನೆಲೆಯಲ್ಲಿ ಕೂಡಲೇ ಸಿ.ಎಂ.ಸಿದ್ದರಾಮಯ್ಯ ಅವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.


