Wednesday, August 10, 2022

Latest Posts

ಬಳ್ಳಾರಿಯಲ್ಲಿ ಒಂದೇ ದಿನ 10 ಜನರಿಗೆ ಕೊರೋನಾ ಸೊಂಕು ದೃಢ

ಹೊಸದಿಗಂತ ವರದಿ, ಬಳ್ಳಾರಿ:

ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಕಡಿಮೆಯಾಯಿತು ಎನ್ನುವಷ್ಟರಲ್ಲೇ ಒಂದೇ ದಿನ 10 ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ನಗರದ ಸತ್ಯನಾರಾಯಣ ಪೇಟೆ ಬಡಾವಣೆಯ ಅಪಾರ್ಟ್ ಮೆಂಟ್ ಒಂದರಲ್ಲಿ ಶುಕ್ರವಾರ 6 ಪ್ರಕರಣಗಳು ಪತ್ತೆಯಾಗಿವೆ. ತಪಾಸಣೆ ಮುಂದುವರೆದಿದ್ದು, ಶನಿವಾರ ಬೆಳಿಗ್ಗೆ 5ಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ ಎಂದು ಹೇಳಲಾಗುತ್ತಿದೆ. ಆದರೇ, ಅಧಿಕೃತ ಮಾಹಿತಿ ಜಿಲ್ಲಾಡಳಿತದಿಂದ ಬರಬೇಕಿದೆ. ಶುಕ್ರವಾರ ಜಿಲ್ಲಾಡಳಿತ ಬಿಡುಗಡೆಗೊಳಿಸಿದ ಕೊರೋನಾ ವರದಿಯಲ್ಲಿ 10 ಜನರಿಗೆ ಸೊಂಕು ಇರುವುದು ದೃಢಪಟ್ಟಿದೆ.

ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇಲ್ಲಿವರೆಗೂ ಜಿಲ್ಲೆಯಲ್ಲಿ 54 ಪ್ರಕರಣಗಳು ಸಕ್ರೀಯವಾಗಿವೆ. ಜಿಲ್ಲೆಯಲ್ಲಿ ಒಟ್ಟು ಇಲ್ಲಿವರೆಗೆ 39,253 ಜನರಿಗೆ ಸೊಂಕು ಇರುವುದು ದೃಢಪಟ್ಟಿದ್ದು, 38,602 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಗಿದ್ದಾರೆ. 597 ಜನರು ಇಲ್ಲಿವರೆಗೆ ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss