September 30, 2026
Wednesday, September 30, 2026
spot_img

GBA ಸಹಿತ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ: ಸಚಿವ ಹೆಚ್.ಕೆ ಪಾಟೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: :

ರಾಜ್ಯದ ನಡೆಯುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಬಳಸಿಯೇ ಮಾಡುವುದಾಗಿ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.

ಗದಗದ ಲಕ್ಕುಂಡಿಯಲ್ಲಿ ಮಾತನಾಡಿದ ಅವರು, ಜನರಿಗೆ ಇವಿಎಂ ಮಷಿನ್ ಮೇಲಿನ ವಿಶ್ವಾಸ ಹೋಗ್ತಿದೆ. ಎಲ್ಲೆಡೆ ಬ್ಯಾಲೆಟ್ ಪೇಪರ್ ಬಳಕೆ ಆಗ್ತಿದೆ. ಆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ ಎಂಬುದಾಗಿ ತಿಳಿಸಿದರು.

ಹಾಗಾಗಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬ್ಯಾಲೆಟ್ ಪೇಪರ್ ಬಳಕೆ ಮಾಡುತ್ತೇವೆ ಎಂದು ಹೇಳಿದರು.

Must Read