Thursday, September 29, 2022

Latest Posts

ದೀಪಾವಳಿಯಂದು ದೆಹಲಿಯಲ್ಲಿ ಪಟಾಕಿ ನಿಷೇಧ: ಆಪ್‌ ಸರ್ಕಾರ ಕಟ್ಟುನಿಟ್ಟಿನ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಈ ವರ್ಷದ ದೀಪಾವಳಿಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಉತ್ಪಾದನೆ, ಸಂಗ್ರಹಣೆ ಮಾರಾಟ ಮತ್ತು ಬಳಕೆಯ ಮೇಲೆ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಘೋಷಿಸಿದ್ದಾರೆ.
ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಚಿವರು ಹೇಳಿದರು.
“ಜನರ ಜೀವವನ್ನು ಉಳಿಸಲು ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ” ಎಂದು ರೈ ಟ್ವೀಟ್ ಮಾಡಿದ್ದಾರೆ. ಆನ್‌ಲೈನ್‌ನಲ್ಲಿ ಪಟಾಕಿ ಮಾರಾಟದ ಮೇಲೂ ನಿಷೇಧವಿರುತ್ತದೆ ಮತ್ತು ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸರು, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆಯೊಂದಿಗೆ ಚರ್ಚಿಸಿದ ನಂತರ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದು ರೈ ಹೇಳಿದ್ದಾರೆ.
ಕಳೆದ ದೀಪಾವಳಿಯಂದು ದಿಲ್ಲಿ ಸರಕಾರವು ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿತ್ತು. ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ಹರ್ಯಾಣ ಮತ್ತು ಪಂಜಾಬ್‌ನಂತಹ ರಾಜ್ಯಗಳಲ್ಲಿ ಪಟಾಕಿಯಿಂದ ವಾತವರಣ ಮತ್ತಷ್ಟು ಅಸಹನೀಯವಾಗುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!