ಕೃಷ್ಣರಾಜ ಸಾಗರ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಿ: ಹೈಕೋರ್ಟ್‌ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೃಷ್ಣರಾಜ ಸಾಗರ (KRS) ಸುತ್ತಮುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್‌ (High Court) ಮಹತ್ವದ ಆದೇಶ ನೀಡಿದೆ.

ಹೈಕೋರ್ಟ್‌ ಮುಖ್ಯ ನಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗಿಯ ಪೀಠವು, ಕೆಆರ್‌ಎಸ್ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ (Mining) ನಡೆಸಬಾರದು. ಕೆಆರ್‌ಎಸ್ ಜಲಾಶಯಕ್ಕೆ ಹಾನಿ ಮಾಡುವುದನ್ನು ತಡೆಗಟ್ಟಬೇಕಿದೆ. ಕೆಆರ್‌ಎಸ್ ಸುರಕ್ಷತೆ ನಮಗೆ ಮುಖ್ಯ ಎಂದು ಹೇಳಿದೆ.

ಭೂಪರಿವರ್ತನೆಗೂ ಮುನ್ನ ಪರೀಕ್ಷಾರ್ಥ ಸ್ಫೋಟ ನಡೆಸಿ ಹಾನಿ ಸಾಧ್ಯತೆ ಪರಿಗಣಿಸಿ ಅನುಮತಿಯ ಷರತ್ತು ಹಾಕಿದ್ದ ಜಿಲ್ಲಾಧಿಕಾರಿ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಈ ಆದೇಶ ಪ್ರಕಟಿಸಿದೆ.

ಕೆಆರ್‌ಎಸ್ ಸುರಕ್ಷತೆಯೇ ನಮಗೆ ಮುಖ್ಯವಾಗಿದೆ. ಈ ಕಾರಣಕ್ಕೆ ಕೆಆರ್‌ಎಸ್ ಸುತ್ತಮುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಬಾರದು ಎಂದು ವಿಭಾಗೀಯ ಪೀಠ ಆದೇಶ ಪ್ರಕಟಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!