ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಎನ್‌ಆರ್‌ಸಿ, ಸಿಎಎ ಬ್ಯಾನ್: ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಎನ್‌ಆರ್‌ಸಿ, ಸಿಎಎ ಮತ್ತು ಏಕರೂಪ ನಾಗರಿಕ ಸಂಹಿತೆ ಇರುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಅಸ್ಸಾಂನ ಸಿಲ್ಚಾರ್‌ನಲ್ಲಿ ತಮ್ಮ ಸಾರ್ವತ್ರಿಕ ಚುನಾವಣಾ ಪ್ರಚಾರದ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಚುನಾವಣೆ ಮತ್ತು ಪ್ರಜಾಪ್ರಭುತ್ವ ಇರುವುದಿಲ್ಲ. ಬಿಜೆಪಿ ಇಡೀ ದೇಶವನ್ನೇ ಬಂಧನ ಶಿಬಿರವನ್ನಾಗಿ ಮಾಡಿಟ್ಟಿದೆ. ವಿರೋಧ ಪಕ್ಷ ಅಧಿಕಾರಕ್ಕೆ ಬಂದರೆ ತಾರತಮ್ಯದ ಎಲ್ಲ ಕಾನೂನುಗಳನ್ನು ರದ್ದುಪಡಿಸುತ್ತೇವೆ’ ಎಂದು ಗುಡುಗಿದರು.

ವಿರೋಧ ಪಕ್ಷವು ಅಧಿಕಾರಕ್ಕೆ ಬಂದರೆ ಈಶಾನ್ಯ ರಾಜ್ಯದ ಅಭಿವೃದ್ಧಿಗೆ ಮಾತ್ರ ಶ್ರಮಿಸುವುದಾಗಿ ಹೇಳಿದ ಸಿಎಂ, ಯಾರೂ ನನಗೆ ಏನೂ ಹೇಳದೆ ನಾನು ಅಸ್ಸಾಂನ ಸುಶ್ಮಿತಾ ದೇವ್ ಅವರನ್ನು ಟಿಎಂಸಿಯ ರಾಜ್ಯಸಭಾ ಸಂಸದರನ್ನಾಗಿ ಮಾಡಿದ್ದೇನೆ. ಅವಕಾಶ ಸಿಕ್ಕರೆ ಇನ್ನಷ್ಟು ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!