ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ಚತುರ್ಥಿಯ ಸಂದರ್ಭದಲ್ಲಿ (ನಾಳೆ) ಬುಧವಾರ ಬೆಂಗಳೂರಿನಾದ್ಯಂತ ಪ್ರಾಣಿ ವಧೆ, ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ.
ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳು ಎರಡೂ ಮುಚ್ಚಲ್ಪಟ್ಟಿರಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಗಣೇಶ ಚತುರ್ಥಿ ಆಚರಣೆಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಪ್ಲಾಸ್ಟರ್ ಆಫ್ ಪ್ಯಾರೀಸ್ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಇತ್ತ ಬಿಬಿಎಂಪಿ ಕೂಡ ಪರಿಸರಸ್ನೇಹಿ ಗಣಪನ ಮೂರ್ತಿ ಖರೀದಿಸಿ ಹಬ್ಬ ಆಚರಿಸುವಂತೆ ಕರೆ ನೀಡಿದ್ದು, ಆ ನಿಟ್ಟಿನಲ್ಲಿ ನಟ-ನಟಿಯರ ಮೂಲಕ ಜಾಗೃತಿಯನ್ನೂ ಮೂಡಿಸುತ್ತಿದೆ.