ಬೆಂಗಳೂರಲ್ಲಿ ಈ ದಿನ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ: ಬಿಬಿಎಂಪಿ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀರಾಮ ನವಮಿ (Ram Navami 2023) ಹಬ್ಬದ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ.

ಈ ಕುರಿತು ಪಾಲಿಕೆಯ ಜಂಟಿ ನಿರ್ದೇಶಕರು (ಪಶುಪಾಲನೆ) ಆದೇಶ ಹೊರಡಿಸಿದ್ದು, ಮಾರ್ಚ್‌ 30ರ ಗುರುವಾರ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!