ಅಪಾಯಕಾರಿ ಶ್ವಾನಗಳ ಸಾಕಾಣಿಕೆ ನಿಷೇಧ: ಕೇಂದ್ರ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಿಟ್‌ಬುಲ್ ಟೆರಿಯರ್, ಅಮೇರಿಕನ್ ಬುಲ್‌ಡಾಗ್ಸ್, ರೊಟ್‌ವೀಲರ್ಸ್ ಮತ್ತು ಮ್ಯಾಸ್ಟಿಫ್ಸ್ ಸೇರಿದಂತೆ 23 ತಳಿಗಳ ಅಪಾಯಕಾರಿ ನಾಯಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದ್ರೆ, ಇಂದು ಕರ್ನಾಟಕ ಹೈಕೋರ್ಟ್ (Karnataka High Court) ​ ಕೇಂದ್ರದ ಸುತ್ತೋಲೆಯನ್ನು ರದ್ದುಗೊಳಸಿ ಆದೇಶ ಹೊಡಿಸಿದೆ.

ಈ ರೀತಿಯ ಕ್ರಮಕ್ಕೂ ಮುನ್ನ ಶ್ವಾನ ತಳಿ ಸಂವರ್ಧನಾ‌ ಸಂಘಟನೆಯೊಂದಿಗೆ ಸಮಾಲೋಚಿಸಬೇಕು ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.

ಕೆಲ ಶ್ವಾನ ತಳಿ ನಿಷೇಧಿಸಿ ಕೇಂದ್ರ ಸರ್ಕಾರ ಹೊಡಸಿದ್ದ ಸುತ್ತೋಲೆ ಪ್ರಶ್ನಿಸಿ, ಕಿಂಗ್ ಸಾಲೊಮನ್ ಡೇವಿಡ್ ಮತ್ತಿತರರು ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರದ ನಿಷೇಧ ಸುತ್ತೋಲೆಯನ್ನು ರದ್ದುಗೊಳಸಿದೆ. ಕಾಯ್ದೆಯಡಿ ರಚಿಸಿದ ಸಮಿತಿಯ ಶಿಫಾರಸು ಮಾತ್ರ ಪರಿಗಣಿಸಬೇಕು. ಕ್ರಮಕ್ಕೆ ಮುನ್ನ ಶ್ವಾನ ತಳಿ ಸಂವರ್ಧನಾ‌ ಸಂಘಟನೆಯೊಂದಿಗೆ ಸಮಾಲೋಚಿಸಬೇಕು. ಸರ್ಕಾರ ಶ್ವಾನ ತಳಿ‌ ನಿಷೇಧಿಸುವ ಮುನ್ನ ಕಾನೂನಿನ ಕ್ರಮ ಅನುಸರಿಸಬೇಕು. ಶ್ವಾನ ಪಾಲಕರ ಮೇಲೆಯೂ ಹೊಣೆ‌ನಿಗದಿಪಡಿಸುವ ಅಗತ್ಯವಿದೆ. ಶ್ವಾನ ಕಡಿತಕ್ಕೊಳಗಾದವರಿಗೆ ಚಿಕಿತ್ಸೆ, ನಷ್ಟಪರಿಹಾರದಂತಹ ಹೊಣೆ ನಿಗದಿ ಸೂಕ್ತ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ಕೇಂದ್ರ ನಿಷೇಧಿಸಿದ್ದ ಶ್ವಾನಗಳ ತಳಿ ಪಟ್ಟಿ ಹೀಗಿದೆ
ಪಿಟ್‌ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೋ, ಅಮೇರಿಕನ್ ಬುಲ್‌ಡಾಗ್, ಬೋರ್‌ಬೋಲ್, ಕಂಗಲ್, ರಷ್ಯನ್ ಶೆಫರ್ಡ್, ಟೊರ್ನ್‌ಜಾಕ್, ಸರ್ಪ್ಲಾನಿನಾಕ್, ಜಪಾನೀಸ್ ಟೋಸಾ ಮತ್ತು ಅಕಿಟಾ, ಮಾಸ್ಟಿಫ್ಸ್, ರಾಟ್‌ವೀಲರ್, ಟೆರಿಯರ್‌ಗಳು ರಿಡ್ಜ್ಬ್ಯಾಕ್, ವುಲ್ಫ್ ಡಾಗ್ಸ್, ಕೆನರಿಯೊ, ಅಕ್ಬಾಶ್ ನಾಯಿ, ಮಾಸ್ಕೋ ಗಾರ್ಡ್ ಡಾಗ್, ಕೇನ್ ಕೊರ್ಸೊ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!