ದಕ್ಷಿಣ ಕೊರಿಯಾದಲ್ಲಿ ನಾಯಿ ಮಾಂಸಕ್ಕೆ ನಿಷೇಧ: ಸಂಸತ್ತಿನಲ್ಲಿ ವಿಧೇಯಕ ಮಂಡನೆ

ಹೊಸದಿಂಗತ ಡಿಜಿಟಲ್ ಡೆಸ್ಕ್:

ದಕ್ಷಿಣ ಕೊರಿಯಾದ ರಾಷ್ಟ್ರೀಯ ಅಂಸೆಬ್ಲಿ ಅಥವಾ ಸಂಸತ್ತು ದೇಶದಲ್ಲಿ ನಾಯಿ ಮಾಂಸ ಸೇವನೆಯನ್ನು ನಿಷೇಧಿಸುವ ವಿಶೇಷ ಮಸೂದೆಯನ್ನು ಇಂದು (ಜ. 9) ರಂದು ಅಂಗಿಕರಿಸಲಾಗಿದೆ.

ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಕೊರಿಯಾದಲ್ಲಿ ನಾಯಿ ಮಾಂಸ ಸೇವನೆ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಇದರ ಬೆನ್ನಲ್ಲಿಯೇ ಈ ಅಭ್ಯಾಸವನ್ನು ಕೊನೆ ಮಾಡಲು ಸರ್ಕಾರವೇ ಈ ನಿರ್ಧಾರ ಮಾಡಲಾಗಿದೆ. ನಾಯಿಗಳ ಸಂತಾನೋತ್ಪತ್ತಿ, ಮಾಂಸಕ್ಕಾಗಿ ನಾಯಿಗಳನ್ನು ಕತ್ತರಿಸುವುದು ಹಾಗೂ ಮಾರಾಟ ಮಾಡುವದನ್ನು ತಡೆಯಲು ಈ ಮಸೂದೆಯನ್ನು ಮಂಡಿಸಲಾಗಿದೆ.

ಜಾರಿಯಾಗಿರುವ ಮಸೂದೆಯ ಪರವಾಗಿ ಸಂಸತ್ತಿನಲ್ಲಿ 208 ಮತಗಳು ಬಂದಿದ್ದು, ಈ ಸಂದರ್ಭದಲ್ಲಿ ಇಬ್ಬರು ಸದಸ್ಯರು ಗೈರಾಗಿರುವುದರೊಂದಿಗೆ ಈ ಮಸೂದೆ ಅಂಗೀಕಾರವಾಗಿದೆ ಎಂದು ಯೋನ್ಹಾಪ್ ನ್ಯೂಸ್ ಏಜೆನ್ಸಿ ಮಾಹಿತಿ ನೀಡಿದೆ. ದೇಶದಲ್ಲಿ ಪ್ರಾಣಿಗಳ ಹಕ್ಕುಗಳ ಜಾಗೃತಿ ಮತ್ತು ಸಾಕುಪ್ರಾಣಿಗಳ ಮಾಲೀಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಪೀಪಲ್ ಪವರ್ ಪಾರ್ಟಿ ಮತ್ತು ಪ್ರಮುಖ ವಿರೋಧ ಪಕ್ಷ ಡೆಮಾಕ್ರಟಿಕ್ ಪಾರ್ಟಿ ಜಂಟಿಯಾಗಿ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ನಾಯಿ ಮಾಂಸ ಉದ್ಯಮದಲ್ಲಿಯೇ ಈವರೆಗೂ ಬದುಕು ಕಂಡುಕೊಂಡಿದ್ದ ಜನರಿಗೆ ಉದ್ಯೋಗಗಳನ್ನು ಬದಲಾಯಿಸಲು ಸಹಾಯ ಮಾಡಲು ಕೇಂದ್ರದಿಂದ ಸಬ್ಸಿಡಿಗಳನ್ನು ನೀಡಲಾಗುತ್ತದೆ ಎಂದೂ ಮಸೂದೆಯಲ್ಲಿ ಸೂಚಿಸಲಾಗಿದೆ. ದೇಶದ ಪ್ರಥಮ ಮಹಿಳೆ ಕಿಮ್ ಕಿಯೋನ್ ಹೀ ಕೂಡ ನಿಷೇಧಕ್ಕೆ ಬೆಂಬಲವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ,

“ಈ ನಿಷೇಧವು ಪ್ರಾಣಿಗಳ ರಕ್ಷಣೆಗೆ ದಕ್ಷಿಣ ಕೊರಿಯಾದ ಅಭ್ಯಾಸದಲ್ಲಿ ಮಹತ್ವದ ತಿರುವು ಪಡೆಯಲಿದೆ ಎಂದು ನಾವು ನಂಬುತ್ತೇವೆ” ಎಂದು ಹ್ಯೂಮನ್ ಸೊಸೈಟಿ ಇಂಟರ್ನ್ಯಾಷನಲ್‌ನ ಲೀ ಸಾಂಗ್-ಕ್ಯುಂಗ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!