ಈ ಬಾರಿ ದೀಪಾವಳಿಗೆ ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿ ನಿಷೇಧ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಡಿನ ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ, ಈ ಬಾರಿ ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿ ನಿಷೇಧ ಮಾಡಬೇಕಾ ಎನ್ನುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪಟಾಕಿ ನಿಷೇಧ ಪ್ರಾಯೋಗಿಕ ಜಾರಿಗೊಳಿಸಿ ಯಶಸ್ವಿಯಾದರೆ ಇಡೀ ರಾಜ್ಯಕ್ಕೇ ವಿಸ್ತರಿಸಲಾಗುವುದು, ಈ ಬಗ್ಗೆ ಸಾಧಕ ಬಾಧಕ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಈಗಾಗಲೇ ದೆಹಲಿಯಲ್ಲಿ ಪಟಾಕಿ ನಿಷೇಧ ಮಾಡಲಾಗಿದೆ, ರಾಜ್ಯ ಸರ್ಕಾರದಲ್ಲಿ ಪಕ್ಷದ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧಿಸಲಾಗಿದೆ. ಇನ್ನು ಪಟಾಕಿ-ಸ್ಫೋಟಕ ಅಗ್ನಿ ದುರಂತಗಳು ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಎಷ್ಟೋ ಅಮಾಯಕರು ಪ್ರಾಣ ಬಿಟ್ಟಿದ್ದಾರೆ. ಈ ಘಟನೆಗಳು ಮತ್ತೆ ಮರುಕಳಿಸಬಾರದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!