ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ನಿರಂತರವಾಗಿ ವಿರೋಧಿಸುತ್ತಿರುವ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಸಂಪೂರ್ಣವಾಗಿ ತಡೆಯುವ ಸಲುವಾಗಿ ವಿಧಾನಸಭೆಯಲ್ಲಿಂದು ಹೊಸ ಮಸೂದೆ ಮಂಡನೆಗೆ ತಯಾರಿ ನಡೆಸಿದೆ.
ತಮಿಳುನಾಡಿನಾದ್ಯಂತ ಹಿಂದಿ ಹೋರ್ಡಿಂಗ್ಸ್, ಬೋರ್ಡ್‌ಗಳು, ಚಲನಚಿತ್ರಗಳು ಮತ್ತು ಹಾಡುಗಳನ್ನ ನಿಷೇಧಿಸುವ ಹೊಸ ಮಸೂದೆ ಮಂಡನೆಗೆ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದೆ. ಮಂಗಳವಾರ ರಾತ್ರಿ ಕೂಡ ಮಸೂದೆ ಕುರಿತು ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ಅಧಿಕಾರಿಗಳು ಈ ಕ್ರಮವು ಸಂವಿಧಾನಕ್ಕೆ ಅನುಗುಣವಾಗಿದೆ ಎಂದು ಹೇಳಿರುವುದಾಗಿ ಎಂದು ವರದಿಗಳಿಂದ ತಿಳಿದುಬಂದಿದೆ.