ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ತಯಾರಿಕೆ, ಮಾರಾಟ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಯುಮಾಲಿನ್ಯವನ್ನು ತಡೆಗಟ್ಟುವ ಪ್ರಯತ್ನದಲ್ಲಿ ದೆಹಲಿ ಸರ್ಕಾರವು ಜನವರಿ 1, 2025 ರವರೆಗೆ ಎಲ್ಲಾ ರೀತಿಯ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಘೋಷಿಸಿದೆ.

ಈ ನಿಷೇಧವು ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ಪಟಾಕಿಗಳ ತಯಾರಿಕೆ, ಸಂಗ್ರಹಣೆ ಮತ್ತು ಮಾರಾಟವನ್ನು ಒಳಗೊಂಡಿದೆ.

ದೆಹಲಿ ಸರ್ಕಾರವು 2025 ರ ಜನವರಿ 1 ರವರೆಗೆ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟವನ್ನು (ಆನ್ಲೈನ್ ಮಾರ್ಕೆಟಿಂಗ್ ಪ್ಲಾಟ್ಫಾರ್ಮ್ಗಳ ಮೂಲಕ ವಿತರಣೆ ಸೇರಿದಂತೆ) ಸಂಪೂರ್ಣವಾಗಿ ನಿಷೇಧಿಸಲು ನಿರ್ಧರಿಸಿದೆ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!