ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದ ಕ್ರಿಟಿಕಲ್ ಟೈಗರ್ ಆವಾಸಸ್ಥಾನದ 1 ಕಿ.ಮೀ ವ್ಯಾಪ್ತಿಯಲ್ಲಿರುವ ಎಲ್ಲಾ ಗಣಿಗಾರಿಕೆ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಇಂದು (ಬುಧವಾರ) ಮಹತ್ವದ ಆದೇಶ ನೀಡಿದೆ.
ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಸಂದೀಪ್ ಮೆಹ್ತಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು, ಈ ಆದೇಶಗಳ ಅನುಸರಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.
ಈ ವಿಷಯದ ಕುರಿತು ಹೆಚ್ಚಿನ ವಿಚಾರಣೆ ನಡೆಸಲು ಜುಲೈನಲ್ಲಿ ದಿನಾಂಕ ನಿಗದಿಪಡಿಸಲಾಗಿದೆ.
ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆಯಿಲ್ಲದೆ ಸರಿಸ್ಕಾ ವನ್ಯಜೀವಿ ಅಭಯಾರಣ್ಯದ 10 ಕಿ.ಮೀ ಪ್ರದೇಶದಲ್ಲಿ ಮತ್ತು ಸಿಟಿಎಚ್‌ನ 1 ಕಿ.ಮೀ ಪ್ರದೇಶದೊಳಗೆ ಅಕ್ರಮ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲು ರಾಜ್ಯಕ್ಕೆ ನಿರ್ದೇಶನದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.
ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದ CTH ಪ್ರದೇಶಗಳನ್ನು ಒಳಗೊಂಡಿರುವ ಪರಿಸರ ಸೂಕ್ಷ್ಮ ವಲಯಗಳಲ್ಲಿ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ರಾಜಸ್ಥಾನದ ಬಹು ಗಣಿ ಕಂಪನಿಗಳು ಸುಪ್ರೀಂ ಕೋರ್ಟ್ ನೀಡಿದ ವಿವಿಧ ಆದೇಶಗಳು ಮತ್ತು ನಿರ್ದೇಶನಗಳನ್ನು ಉಲ್ಲಂಘಿಸುತ್ತಿವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ವಿವಿಧ ವ್ಯಕ್ತಿಗಳು ಮತ್ತು ಕಂಪನಿಗಳು ರಾಷ್ಟ್ರೀಯ ವನ್ಯಜೀವಿ ಮಂಡಳಿಯ (ಎನ್‌ಬಿಡಬ್ಲ್ಯುಎಲ್) ಅನುಮೋದನೆಯನ್ನು ಪಡೆಯದೆ ಮತ್ತು ಪರಿಸರ ಸೂಕ್ಷ್ಮ ವಲಯದ ಒಳಗೆ ಅಥವಾ ಹೊರಗೆ ಕಾರ್ಯ ನಿರ್ವಹಿಸಲು ಪರಿಸರ ಇಲಾಖೆಯ ಅನುಮತಿ ತೆಗೆದುಕೊಳ್ಳದೆ ಅಕ್ರಮ ಗಣಿಗಾರಿಕೆ ಚಟುವಟಿಕೆಗಳನ್ನು ನಡೆಸುತ್ತಿವೆ, ಕಳೆದ ವರ್ಷಗಳಲ್ಲಿ ನ್ಯಾಯಾಲಯ ನೀಡಿದ ಸ್ಪಷ್ಟ ನಿರ್ದೇಶನದ ನಿಯಮಗಳನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಲಾಗಿದೆ.