ಪತಂಜಲಿಯ 5 ಔಷಧಿ ಉತ್ಪನ್ನಗಳ ಮೇಲಿನ ನಿಷೇಧ ರದ್ದು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯೋಗ ಗುರು ಬಾಬಾ ರಾಮದೇವ್ ಅವರ ೫ ಪತಂಜಲಿ ಉತ್ಪನ್ನಗಳ ಮೇಲೆ ಹೇರಿದ್ದ ನಿಷೇಧವನ್ನು ಉತ್ತರಾಖಂಡದ ಆಯುರ್ವೇದ ಮತ್ತು ಯುನಾನಿ ರದ್ದುಗೊಳಿಸಿದೆ.

ದಿವ್ಯಾ ಫಾರ್ಮಸಿಗೆ ಮಧುಮೇಹ, ರಕ್ತದೊತ್ತಡ, ಗೋಯಿಟರ್, ಗ್ಲುಕೋಮಾ ಮತ್ತು ಅಧಿಕ ಕೊಲೆಸ್ಟ್ರಾಲ್ಗೆ ಸಂಬಂಧಿಸಿದ ಐದು ಔಷಧಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಈ ಹಿಂದೆ ಸೂಚಿಸಲಾಗಿತ್ತು.

ಇದೀಗ ಹಿಂದಿನ ಆದೇಶವನ್ನು ತಿದ್ದುಪಡಿ ಮಾಡಿ, ಪ್ರಾಧಿಕಾರವು ಈ ಔಷಧಿಗಳ ಉತ್ಪಾದನೆಯನ್ನು ಮುಂದುವರಿಸಲು ಸಂಸ್ಥೆಗೆ ಅನುಮತಿ ನೀಡುವ ಹೊಸ ಆದೇಶವನ್ನು ಶನಿವಾರ ಹೊರಡಿಸಿದೆ.

ತನ್ನ ಹಿಂದಿನ ಆದೇಶದಲ್ಲಿ, ಪ್ರಾಧಿಕಾರವು ತನ್ನ ಐದು ಉತ್ಪನ್ನಗಳಾದ ಬಿಪಿಗ್ರಿಟ್, ಮಧುಗ್ರಿಟ್, ಥೈರೋಗ್ರಿಟ್, ಲಿಪಿಡಮ್ ಮಾತ್ರೆಗಳು ಮತ್ತು ಐಗ್ರಿಟ್ ಗೋಲ್ಡ್ ಮಾತ್ರೆಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ದಿವ್ಯಾ ಫಾರ್ಮಸಿಗೆ ಸೂಚಿಸಿತ್ತು. ಇವುಗಳನ್ನು ರಕ್ತದೊತ್ತಡ, ಮಧುಮೇಹ, ಗಾಯಿಟರ್, ಗ್ಲುಕೋಮಾ ಮತ್ತು ಅಧಿಕ ಕೊಲೆಸ್ಟ್ರಾಲ್ಗೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!