ಪಿ.ಎಫ್.ಐ ನಿಷೇಧ: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ-ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದಲ್ಲಿ ಪಿಎಫ್‌ಐ ಬ್ಯಾನ್‌ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಈ ಕುರಿತು ಇಂದು ಬೆಳಗ್ಗೆ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದರು.

ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು,ಆ ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗ ಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ.

ಅಂತೆಯೇ ವಿರೋಧ ಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!