ದೇಶದಲ್ಲಿ ಸಂಘರ್ಷಉಂಟುಮಾಡಲು ಸಂಚು ರೂಪಿಸುತ್ತಿದ್ದ ಪಿಎಫ್‌ಐ ನಿಷೇಧ ಸ್ವಾಗತಾರ್ಹ: ಡಾ.ಸಿ.ಎನ್ ಅಶ್ವತ್ಥನಾರಾಯಣ

ಹೊಸದಿಗಂತ ವರದಿ ರಾಮನಗರ:

ಸಮಾಜ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಪಿಎಫ್ಐ ಮತ್ತು ಅದರ 8 ಅಂಗಸಂಸ್ಥೆಗಳನ್ನು 5 ವರ್ಷಗಳ ಮಟ್ಟಿಗೆ ನಿಷೇಧಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಇಡೀ ದೇಶವೇ ಸ್ವಾಗತಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಘಟನೆಯು ಬೇರೆ ಯಾವುದೇ ರೂಪದಲ್ಲಿ ತಲೆ ಎತ್ತದಂತೆ ತೀವ್ರ ನಿಗಾ ವಹಿಸಲಾಗುವುದು.
ಪಿಎಫ್ಐ ಸಂಘಟನೆಯು ವಿದೇಶಿ ಜಾಲಗಳ ಮೂಲಕ ಅಕ್ರಮ ನೆರವು ಪಡೆದುಕೊಳ್ಳುತ್ತಿತ್ತು. ಈ ಮೂಲಕ ದೇಶದಲ್ಲಿ ಧಾರ್ಮಿಕ ಸಂಘರ್ಷ ಉಂಟುಮಾಡಲು ಅದು ಸಂಚು ರೂಪಿಸುತ್ತಿತ್ತು ಎಂದು ಅವರು ವಿವರಿಸಿದ್ದಾರೆ.

ಕೇಂದ್ರ ಸರ್ಕಾರವು ಪಿಎಫ್ ಐ ಸಂಘಟನೆಯ ವಿಧ್ವಂಸಕ ಚಟುವಟಿಕೆಗಳು ಹಾಗೂ ಅನುಮಾನಾಸ್ಪದ ಹಣಕಾಸು ವ್ಯವಹಾರಗಳ ಮೇಲೆ ಹದ್ದಿನ ಕಣ್ಣಿಟ್ಟಿತ್ತು. ಇದರ ಬೆನ್ನಲ್ಲೇ ಎರಡು ದಿವಸಗಳ ಹಿಂದೆ ದೇಶಾದ್ಯಂತ ಆ ಸಂಘಟನೆಯ ಕಚೇರಿಗಳು ಮತ್ತು ನಾಯಕರ ಮೇಲೆ ಎನ್ಐಎ ದಾಳಿ ನಡೆಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ಸಮಾಜ ಮತ್ತು ದೇಶದ ಹಿತಕ್ಕೆ ವಿರುದ್ಧವಾಗಿ ವರ್ತಿಸುವ ಯಾವ ಸಂಘಟನೆಗಳನ್ನು ಕೂಡ ಬಿಡುವುದಿಲ್ಲ. ಕೇಂದ್ರ ಸರ್ಕಾರದ ದಾಳಿಯ ಬೆನ್ನಲ್ಲೇ ರಾಜ್ಯ ಪೊಲೀಸರು ಕೂಡ ಮಂಗಳವಾರ 15ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದರು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!