ತ್ರಿಪುರಾದ ಶಾಲಾ-ಕಾಲೇಜುಗಳ ಆವರಣದಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಲೆಗಳು ನಡೆಯುವ ಅವಧಿಯಲ್ಲಿ ಶಾಲಾ ಆವರಣದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ನಡೆಸದಂತೆ ತ್ರಿಪುರಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಶಾಲಾ ಅವಧಿಯಲ್ಲಿ ರಾಜಕೀಯ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಿಗೆ ಕೆಲ ಶಾಲೆಯ ಮುಖ್ಯೋಪಾಧ್ಯಾಯರು ಅವಕಾಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯೋಪಾಧ್ಯಾಯರ ವಿರುದ್ಧ ಶಿಕ್ಷಣ ಇಲಾಖೆಗೆ ವರದಿ ಬಂದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಅದರ ಜೊತೆಗೆ ಯಾವುದೇ ಕಾರ್ಯಕ್ರಮ ನಡೆಸಬೇಕಿದ್ದರೂ ಶಿಕ್ಷಣ ಇಲಾಖೆಯಿಂದ ಎನ್‌ಒಸಿ ತೆಗೆದುಕೊಳ್ಳುವುದು ಕಡ್ಡಾಯ ಆಗಿದೆ.

ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಮತ್ತು ಇಲಾಖೆಯ ನಿಯಮಗಳನ್ನು ಉಲ್ಲಂಘಿಸುವ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತ್ರಿಪುರಾ ಶಿಕ್ಷಣ ಇಲಾಖೆ ಎಚ್ಚರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!