ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗೆ ಮುಂದಾಗಿರುವ ಕೇಂದ್ರ ಸರ್ಕಾರ ಕಳಪೆ ಗುಣಮಟ್ಟದ ಹೆಲ್ಮೆಟ್ ಮಾರಾಟ ಮತ್ತು ಬಳಕೆಗೆ ತಡೆ ನೀಡಿದೆ.
ಕಳಪೆ ಗುಣಮಟ್ಟದ ಹೆಲ್ಮೆಟ್ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ, ರಸ್ತೆ ಬದಿಗಳಲ್ಲಿ ಮಾರಾಟ ಆಗುತ್ತಿರುವ ಕಳಪೆ ಹೆಲ್ಮೆಟ್‌ಗಳಿಗೆ ಬ್ರೇಕ್ ಹಾಕುವ ಜೊತೆಗೆ ವಾಹನ ಸವಾರರಿಗೆ BIS ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್ ಬಳಕೆಯನ್ನೇ ಕಡ್ಡಾಯಗೊಳಿಸಿದೆ.