ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಈಗಾಗಲೇ ಜ. 22ರಂದು ಮದ್ಯ ಮಾರಾಟ ನಿಷೇಧಿಸಿದ್ದು ಇದೀಗ ರಾಮಮಂದಿರ ಉದ್ಘಾಟನೆ ದಿನವಾದ ಜ. 22ರಂದು ರಾಜ್ಯದಲ್ಲಿ ಮಾಂಸ ಮತ್ತು ಮೀನು ಮಾರಾಟ ನಿಷೇಧಿಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಗುರುವಾರ ಘೋಷಿಸಿದೆ.
ಜನವರಿ 22 ರಂದು ರಾಮ ಮಂದಿರದ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜ.22ರಂದು ರಾಮ್ ಲಾಲಾ ಪಟ್ಟಾಭಿಷೇಕ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸಹ ಅನೇಕರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.