ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಹಾವೀರ ಜಯಂತಿ ಪ್ರಯುಕ್ತ ಏಪ್ರಿಲ್ 4ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ ಎಂದು ಬಿಬಿಎಂಪಿ ಹೇಳಿದೆ.
ಬಿಬಿಎಂಪಿ ಪಶುಪಾಲನಾ ಜಂಟಿ ನಿರ್ದೇಶಕರು ಈ ಕುರಿತು ಸುತ್ತೋಲೆಯನ್ನು ಕೂಡ ಹೊರಡಿಸಿದ್ದಾರೆ. ಸುತ್ತೋಲೆಯ ಅನ್ವಯ ಏ.4 ಅಂದರೆ ಮಂಗಳವಾರ ಮಹಾವೀರ ಜಯಂತಿ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ.
ಇದೇ ರೀತಿಯಾಗಿ ಮಾರ್ಚ್ 30ರಂದು ರಾಮನವಮಿಯಂದು ಸಹ ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿತ್ತು.