ದೆಹಲಿಯ ಏಮ್ಸ್ ಆಸ್ಪತ್ರೆ ಆವರಣದಲ್ಲಿ ಒಂದು ಬಾರಿ ಬಳಸಿ ಎಸೆಯುವ ಪ್ಲಾಸ್ಟಿಕ್ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಏಮ್ಸ್ ಆಸ್ಪತ್ರೆ ಆವರಣದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ.
ಒಂದು ಬಾರಿ ಬಳಸಿ ಎಸೆಯುವ ಪ್ಲಾಸ್ಟಿಕ್‌ಗಳನ್ನು ಇನ್ಮುಂದೆ ಇಲ್ಲಿ ಬಳಸುವಂತಿಲ್ಲ.
ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳಿಗೆ ಅನುಸಾರವಾಗಿ ಆವರಣದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ಎಸ್‌ಯುಪಿ ವಸ್ತುಗಳ ವಿತರಣೆಯೂ ಇರುವುದಿಲ್ಲ.

ರಾಷ್ಟ್ರೀಯ ಪ್ಲಾಸ್ಟಿಕ್ ತ್ಯಾಜ್ಯದ ಉತ್ಪಾದನೆಯನ್ನು ಕಡಿಮೆ ಮಾಡಲು ರೆಡ್ಯೂಸ್, ರೀ ಯೂಸ್, ರೀಸೈಕಲ್ ಎನ್ನುವ ಉದ್ದೇಶ ಹೊಂದಲಾಗಿದೆ. ಆದರೆ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ಇದು ಅಸಾಧ್ಯವಾಗಿದೆ. ಹೀಗಾಗಿ ಪ್ರಮುಖ ನಿರ್ಧಾರವನ್ನು ಏಮ್ಸ್ ಕೈಗೊಂಡಿದೆ. ಭಾರತದ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯು ಅದರ 2015 ರ ಗಾತ್ರಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಹೀಗಾಗಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಏಮ್ಸ್ ನಿರ್ಧಾರ ಕೈಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!