ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಹಿಷ ಮಂಡಲೋತ್ಸವ ಹಾಗೂ ಚಾಮುಂಡಿ ಚಲೋ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.
ಇಂದು ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ ಮತ್ತು ತಾಯಿ ದರುಶನಕ್ಕೆ ಯಾರಿಗೂ ಅವಕಾಶವಿಲ್ಲ. ಹೀಗಾಗಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಕರೆ ನೀಡಿದೆ. ಬೆಳಗ್ಗೆ 10:30ಕ್ಕೆ ಚಾಮುಂಡಿಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ ಹಾಗೂ ಪುರಭವನದ ಹೊರಾವರಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದೆ.