ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಈ ಬಗ್ಗೆ‌ ಅರಮನೆ ಮಂಡಳಿ ಉಪ ನಿರ್ದೇಶಕ ಟಿಎಸ್ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಮೈಸೂರು ಅರಮನೆಯೂ ವಿಶ್ವ ವಿಖ್ಯಾತಿಯನ್ನು ಹೊಂದಿದ್ದು, ಅರಮನೆಯ ಸುತ್ತಮುತ್ತಲ ಪ್ರದೇಶವನ್ನು ‘ಹಳದಿ ವಲಯ’ (Yellow Zone) ವೆಂದು ಘೋಷಿಸಲಾಗಿದೆ. ಆದ್ದರಿಂದ ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಸುವುದನ್ನು ನಿರ್ಬಂಧಿಸಲಾಗಿದೆ.

ಒಂದು ವೇಳೆ ಈ ಪ್ರದೇಶದಲ್ಲಿ ಡ್ರೋನ್​ ಕ್ಯಾಮೆರಾವನ್ನು ಬಳಸುವುದಾದರೆ ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯದೆ ಅನಧಿಕೃತವಾಗಿ ಡ್ರೋನ್​ ಹಾರಾಟ ಮಾಡಿದಲ್ಲಿ ಅಂತವರ ವಿರುದ್ಧ ಕಾನುನೂ ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!