ಮುಜರಾಯಿ ಆಡಳಿತದ ದೇಗುಲಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ: ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಾಜ್ಯ ಧಾರ್ಮಿಕ ಮತ್ತು ದತ್ತಿ ಇಲಾಖೆಯು ಇಂದು ತನ್ನ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ (Temple) ಮೊಬೈಲ್ ಫೋನ್ (Mobile Phone) ಬಳಕೆಗೆ ನಿಷೇಧ ಹೇರಿದೆ.

ಇತ್ತೀಚಿನ ದಿನಗಳಲ್ಲಿ  ದೇವಾಲಯಗಳ ಆವರಣದಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗುತ್ತಿದೆ. ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ಸಿಬ್ಬಂದಿಗೂ ಹಾಗೂ ದೇವರ ದರುಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರುಶನಕ್ಕೆ ಬರುವ ಭಕ್ತಾದಿಗಳು ದೇವರ ದರುಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್‌ ಆಫ್ ಮಾಡಿ, ದೇವರ ದರುಶನ ಮಾಡುವಂತೆ ಸೂಚಿಸಲಾಗಿದೆ.

ಈ ಹಿಂದೆ ತಮಿಳುನಾಡಿನ ಈ ಆದೇಶ ಜಾರಿಯಾಗಿತ್ತು. ಇದೀಗ ಕರ್ನಾಟಕದ ದೇವಸ್ಥಾನಗಳ (Karnataka Temple) ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಿ ಅಧಿಕೃತವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ ಪ್ರಕಟಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!