ಕಾಂತಾರದ ʼವರಾಹ ರೂಪಂʼ ಹಾಡಿನ ಮೇಲಿನ ತಡೆ: ಹೊಂಬಾಳೆ ಫಿಲ್ಮ್ಸ್‌ನ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂತಾರ ಚಿತ್ರದ ʼವರಾಹರೂಪಂʼ ಹಾಡಿನ ಮೇಲೆ ಇದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಬೇಕೆಂದು ಕೋರಿ ಹೊಂಬಾಳೆ ಫಿಲ್ಮ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿದೆ.

ನ್ಯಾಯಮೂರ್ತಿ ಸಿಎಸ್ ಡಯಾಸ್ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಸಂವಿಧಾನದ 227ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಸಿವಿಲ್ ಪ್ರಕ್ರಿಯಾ ಸಂಹಿತೆಯಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಸಂಪೂರ್ಣವಾಗಿ ಬೈಪಾಸ್ ಮಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಕೇರಳದ ಕೆಳ ನ್ಯಾಯಾಲಯಗಳು ಹೊರಡಿಸಿದ ಪ್ರತಿಯೊಂದು ಮಧ್ಯಂತರ ಆದೇಶಗಳಿಗೆ ನಾವು ಆದೇಶವನ್ನು ನೀಡಲು ಸಾಧ್ಯವಿಲ್ಲ. ಒಂದು ವೇಳೆ ಆದೇಶ ನೀಡಿದರೆ ಮೂಲ ನ್ಯಾಯವ್ಯಾಪ್ತಿಯ ನ್ಯಾಯಾಲಯಗಳು ಮತ್ತು ಮೇಲ್ಮನವಿ ನ್ಯಾಯಾಲಯಗಳು ನಿಷ್ಕ್ರಿಯವಾಗುತ್ತವೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದ್ದು, ಜೊತೆಗೆ ಕೋರ್ಟ್‌ ಕಾನೂನಿನಲ್ಲಿ ಲಭ್ಯವಿರುವ ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಹೊಂಬಾಳೆ ಫಿಲ್ಮ್ಸ್‌ನವರಿಗೆ ಸಲಹೆಯನ್ನು ನೀಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!