ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಣಂತಿಯರ ಸಾವು ಪ್ರಕರಣದಲ್ಲಿ ನನ್ನ ತಪ್ಪಿದ್ದರೆ ರಾಜೀನಾಮೆ ನೀಡಲು ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದ ವಿಧಾನಸೌಧದಲ್ಲಿ ಬಾಣಂತಿಯರ ಸರಣಿ ಸಾವಿನ ಕುರಿತು ಮಾತನಾಡಿದ ಅವರು, ಬಿಜೆಪಿಯವರು ಖಂಡಿತವಾಗಿಯೂ ಲೋಕಾಯುಕ್ತಕ್ಕೆ ದೂರು ನೀಡಬೇಕು. ಪ್ರತಿಪಕ್ಷಗಳ ಸಹಕಾರವೂ ಬೇಕು. ಈ ವಿಚಾರದಲ್ಲಿ ತಪ್ಪಿದ್ದರೆ ರಾಜೀನಾಮೆ ನೀಡಲು ಸಿದ್ಧ. ಇದರಲ್ಲಿ ನನಗೆ ಯಾವುದೇ ಪ್ರತಿಷ್ಠೆ ಇಲ್ಲ. ಇದು ಜೀವನದ ವಿಷಯ. ನಾನು ರಾಜೀನಾಮೆ ನೀಡಲು ಸಿದ್ಧ ಎಂದರು.
ಆದರೆ ಸರ್ಕಾರ ಈ ಪ್ರಕರಣದಲ್ಲಿ ಗಂಭೀರವಾಗಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಕ್ರಮ ಕೈಗೊಳ್ಳಬೇಕಾಗಿದೆ. ರಾಜ್ಯದಲ್ಲಿ ಈ ವರ್ಷ 327 ಬಾಣಂತಿಯರ ಸಾವುಗಳು ದಾಖಲಾಗಿವೆ. ಎಲ್ಲವನ್ನೂ ಪರಿಶೀಲಿಸುವಂತೆ ಹೇಳಿದ್ದೇವೆ. ಇಂತಹ ಪ್ರಕರಣಗಳಲ್ಲಿ ಸಹನೆ ಇರಬಾರದು ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.