ಬಾಣಂತಿಯರ ಸಾವು ಪ್ರಕರಣ: ಸಂತ್ರಸ್ಥ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಜಮೀರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

BIMS ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸಚಿವರೂ ಆಗಿರುವ ವಸತಿ ಸಚಿವ ಜಮೀರ್ ಅಹ್ಮದ್ ಅವರು ಮೃತ ಕುಟುಂಬಗಳಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದರು. ಘಟನೆ ಬೆನ್ನಲ್ಲೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿತ್ತು. ಇದೀಗ ಈ ಪರಿಹಾರ ಮೊತ್ತವನ್ನು ಸಚಿವ ಜಮೀರ್ ಅಹ್ಮದ್ ಹೆಚ್ಚಿಸಿದ್ದಾರೆ.

ಈಗಾಗಲೇ ಸರ್ಕಾರದ ವತಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಇದರ ಜೊತೆ ತಲಾ 3 ಲಕ್ಷ ರೂಪಾಯಿ ಹೆಚ್ಚಿಸಿ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!