ಬನವಾಸಿ ಕದಂಬೋತ್ಸವ ಸ್ತಬ್ದಚಿತ್ರ ಮೆರವಣಿಗೆಗೆ ಚಾಲನೆ

ಹೊಸದಿಗಂತ ವರದಿ ಬನವಾಸಿ:

ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವವನ್ನು ವಿಶ್ವಕ್ಕೆ ಪರಿಚಯಿಸುವಂತಹ ಕದಂಬೋತ್ಸವ ಸ್ತಬ್ಧಚಿತ್ರ ಮೆರವಣಿಗೆಗೆ ಮಂಗಳವಾರ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಚಾಲನೆ ನೀಡಿದರು.
ಶಾಲಾ ವಿದ್ಯಾರ್ಥಿಗಳಿಂದ ಕುಂಭಮೇಳ ಹಾಗೂ ಪಥ ಸಂಚಲನ ಭಾರತ ಸೇವದಳ, ಸ್ಕೌಟ್ಸ್ ಮತ್ತು ಗೈಡ್ ಸಮವಸ್ತ್ರದೊಂದಿಗೆ ಆಕರ್ಷಕ ಪಥ ಸಂಚಲನ, ವಿವಿಧ ಸರ್ಕಾರದ ಇಲಾಖೆಗಳಿಂದ ಸ್ತಬ್ಧ ಚಿತ್ರಗಳು ಅತ್ಯಾಕರ್ಷಕ ವಾದ್ಯ ತಂಡಗಳೊಂದಿಗೆ ಮೆರವಣಿಗೆಯನ್ನು ಪ್ರಾರಂಭಿಸಲಾಯಿತು.

ಮೆರವಣಿಗೆಯು ಮಧುಕೇಶ್ವರ ದೇವಸ್ಥಾನದ ಮುಂಭಾಗದಿಂದ ಪ್ರಾರಂಭಗೊಂಡು ಕದಂಬ ವೃತ್ತದ ಮೂಲಕ ಸಾಗಿ ಕದಂಬೋತ್ಸವ ಮೈದಾನದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ರಾಜ ಮಹಾರಾಜರ ವೇಷಭೂಷಣಗಳು, ಸಿದ್ದರ ಕುಣಿತ, ಗೌಳಿ ಕುಣಿತ, ವೀರಗಾಸೆ, ಲಮಾಣಿ ನೃತ್ಯ, ಕಲಾಮೇಳ, ತೆಕ್ಕೆ ಕುಣಿತ ಸೇರಿದಂತೆ ಇನ್ನಿತರ ಕಲಾ ತಂಡಗಳು ಮೆರವಣಿಗೆಗೆ ಭವ್ಯ ಆಕರ್ಷಣೆ ನೀಡಿದವು.

ಮೆರವಣಿಗೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಸಹಾಯಕ ಆಯುಕ್ತೆ ಅಪರ್ಣಾ ರಮೇಶ, ತಹಶೀಲ್ದಾರ ಶ್ರೀಧರ ಮುಂದಲಮನಿ, ಗ್ರೇಡ್ 2 ತಹಶೀಲ್ದಾರ ಶ್ರೀಕೃಷ್ಣ ಕಾಮಕರ್ ಮತ್ತಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!