ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಉಪಚುನಾವಣೆ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹಾರಾಷ್ಟ್ರ ಚುನಾವಣಾ ಅಖಾಡಕ್ಕಿಳಿಯಲು ರೆಡಿಯಾಗಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಮತಯಾಚನೆ ಮಾಡಲಿದ್ದಾರೆ. ಭೀವಂಡಿ, ಚಾಂಡಿವಾಲಿ ಕ್ಷೇತ್ರಗಳಲ್ಲಿ ಇಂದು ಅವರ ಚುನಾವಣಾ ಪ್ರಚಾರದ ಮೊದಲ ದಿನವಾಗಿದೆ.
ಚುನಾವಣಾ ಪ್ರಚಾರ ಮುಗಿಸಿ ಬೆಂಗಳೂರಿಗೆ ವಾಪಸಾಗಲಿರುವ ಅವರು ನಾಳೆ ಸೊಲ್ಲಾಪುರಕ್ಕೆ ತೆರಳಿ ಅಲ್ಲಿ ಸರಣಿ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದು ಬೆಳಗ್ಗೆ 9:55ಕ್ಕೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಮಾನದಲ್ಲಿ ಮುಂಬೈಗೆ ತೆರಳಲಿದ್ದಾರೆ. ಮಧ್ಯಾಹ್ನದ ವೇಳೆಗೆ ಮುಂಬೈ ವಿಮಾನ ನಿಲ್ದಾಣವನ್ನು ತಲುಪುವ ನಿರೀಕ್ಷೆಯಿದೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಸಂಚರಿಸಿ ಮುಂಬೈ ಪಶ್ಚಿಮ ವಿಧಾನಸಭೆಯ ಭೀವಂಡಿ ಕ್ಷೇತ್ರದಿಂದ ಪ್ರಚಾರ ನಡೆಸಲಿದ್ದಾರೆ.