ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಅಗ್ನಿವೀರ್ ಯೋಜನೆ ರದ್ದು: ರಾಹುಲ್ ಗಾಂಧಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ಯೋಜನೆ ರದ್ದು ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಪ್ರಜಾದ್ವನಿ 2 ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಭಾರತೀಯ ಚೊಂಬು ಪಾರ್ಟಿಯಿಂದ ಜನರಿಗೆ ಖಾಲಿ ಚೊಂಬು ಹೊರತಾಗಿ ಬೇರೇನು ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ನಾವು ಬಂದರೆ ಸದ್ಯ ಇರುವಂತ ಜಿಎಸ್ಟಿ ಬದಲಿ ಸರಳ ಜಿಎಸ್ಟಿ ಯೋಜನೆ ಜಾರಿಗೆ ತರಲಾಗುತ್ತದೆ. ಸರಳ ಜಿಎಸ್ಟಿಯಿಂದ ರೈತರು, ಬಡವರು, ಕಾರ್ಮಿಕರಿಗೆ ನೆರವಾಗಲಿದೆ ಎಂದರು.

ರೈತರ ಸಾಲ ಮನ್ನಾ ಮಾಡದ ಮೋದಿ ಶ್ರೀಮಂತರ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು. ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!