spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಂಗಳೂರು ಅಪಘಾತ ಪ್ರಕರಣ: ಮೃತರ ಗುರುತು ಪತ್ತೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಯುವಕ ಯುವತಿ ಫ್ಲೈಓವರ್ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ.
ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದು, ಗುರುತು ಕೂಡ ಸಿಗದಂತಾಗಿತ್ತು.
ಇದೀಗ ಅವರ ಗುರುತು ಪತ್ತೆಯಾಗಿದ್ದು, ಇಬ್ಬರೂ ತಮಿಳುನಾಡು ಮೂಲದ ಟೆಕ್ಕಿಗಳಾಗಿದ್ದರು.
ಪ್ರೀತಂ(30) ಹಾಗೂ ಕೃತಿಕಾ(28) ಮೃತರು. ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದ್ದು, ಕುಟುಂಬಸ್ತರಿಗೆ ಮಾಹಿತಿ ರವಾನಿಸಲಾಗಿದೆ.
ಬೆಳಗ್ಗೆ ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬದವರಿಗೆ ನೀಡಲಾಗುವುದು.
ಕಾರು ಚಾಲಕ ಹೆಬ್ಬಗೋಡಿಯ ನಿತೇಶ್ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿರ್ಲಕ್ಷ್ಯ, ಅತಿವೇಗವೇ ಅಪಘಾತಕ್ಕೆ ಕಾರಣವಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss